ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದು, 21 ಜನರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರ್ಮಿಕರಿಂದ ತುಂಬಿದ್ದ ಪಿಕಪ್ ಟ್ರಕ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಟ್ರಕ್ನ ಟೈರ್ ಒಡೆದ ನಂತರ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟ್ರಕ್ ಮತ್ತೊಂದು ದ್ವಿಚಕ್ರ ವಾಹನಕ್ಕೂ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಯಿತು. ಅಪಘಾತದಿಂದಾಗಿ ರಸ್ತೆಯಲ್ಲಿ ಸ್ವಲ್ಪ ಸಮಯದವರೆಗೆ ಸಂಚಾರ ಅಸ್ತವ್ಯಸ್ತವಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ.. ಆರು ಮಂದಿ ಸಾವು